ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲಿಯೂ ಪ್ರಮುಖವಾಗಿ ಪ್ರಧಾನಿ ಮೋದಿ ಇಂದು ವನ್ಯಜೀವಿಗಳ ಸಂರಕ್ಷಣೆಯ ಪ್ರಯತ್ನವಾಗಿ ಚೀತಾಗಳನ್ನು ಕಾಡಿಗೆ ಬಿಡುವ ಮೂಲಕ ದೇಶಕ್ಕೆ ಹೊಸ ಸಂದೇಶ ರವಾನಿಸಿದ್ದಾರೆ.
ಮಧ್ಯಪ್ರದೇಶದ ಕುನೋ ನ್ಯಾಷನಲ್ ಪಾರ್ಕ್ ಗೆ 8 ಚೀತಾಗಳನ್ನು ಬಿಡುವ ಮೂಲಕ ವನ್ಯಜೀವಿ ಸಂರಕ್ಷಣೆಗೆ ಹೊಸ ಶಕ್ತಿ ತುಂಬಿದರು. ಭಾರತದಲ್ಲಿ ಕಳೆದ 70 ವರ್ಷಗಳಿಂದ ಚೀತಾ ಸಂತತಿ ಇರಲಿಲ್ಲ. ಈ ಮೂಲಕ ಚೀತಾಗಳ ಅಭಿವೃದ್ಧಿ ನಿಟ್ಟಿನಲ್ಲಿ ಹೊಸ ಹೆಜ್ಜೆ ಇಡಲಾಗಿದೆ.
ಈ ಚೀತಾಗಳನ್ನು ನಮಿಬಿಯಾದಿಂದ ತರಲಾಗಿದ್ದು, 5 ಹೆಣ್ಣು ಹಾಗೂ 3 ಗಂಡು ಚೀತಾಗಳು ಉದ್ಯಾನವನ ಸೇರಿವೆ. ಕುನೋ ಉದ್ಯಾನವನಕ್ಕೆ ಚೀತಾಗಳನ್ನು ಬಿಟ್ಟ ಬಳಿಕ ಪ್ರಧಾನಿ ಮೋದಿ ಚೀತಾಗಳ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದರು.