alex Certify BIG BREAKING: ಘಟನೆ ನಡೆದ 85 ಗಂಟೆಗಳ ಬಳಿಕ ಮೈಸೂರು ಗ್ಯಾಂಗ್‌ ರೇಪ್‌ ಆರೋಪಿಗಳು ಕೊನೆಗೂ ಅಂದರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಘಟನೆ ನಡೆದ 85 ಗಂಟೆಗಳ ಬಳಿಕ ಮೈಸೂರು ಗ್ಯಾಂಗ್‌ ರೇಪ್‌ ಆರೋಪಿಗಳು ಕೊನೆಗೂ ಅಂದರ್

ಮಹತ್ವದ ಬೆಳವಣಿಗೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್‌ ರೇಪ್‌ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಪ್ರಕರಣ ನಡೆದ 85 ಗಂಟೆಗಳ ಬಳಿಕ ಆರೋಪಿಗಳು ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದು, ಅವರುಗಳ ವಿಚಾರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಆಗಸ್ಟ್‌ 24 ರಂದು ನಡೆದಿದ್ದ ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯದಾದ್ಯಂತ ತೀವ್ರ ಸಂಚಲನ ಸೃಷ್ಟಿಸಿತ್ತು. ಈ ಹಿನ್ನಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಮೈಸೂರು ಪೊಲೀಸರು ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದರು.

ರಾಜ್ಯದ ವಿವಿಧೆಡೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಇದರ ಮಧ್ಯೆ ಆಡಳಿತಾರೂಢ ಪಕ್ಷದ ಕೆಲ ಸಚಿವರು ಸೇರಿದಂತೆ ಹಲವರು ನೀಡಿದ್ದ ಹೇಳಿಕೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.

ಇದೀಗ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅಜ್ಞಾತ ಸ್ಥಳದಲ್ಲಿ ಆರೋಪಿಗಳ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ ಎಂದು ಹೇಳಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...