ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಎಡಿಜಿಪಿ ಅಮೃತ್ ಪೌಲ್ ಅವರನ್ನು 13 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
545 ಪಿ ಎಸ್ ಐ ಹುದ್ದೆ ನೇಮಕಾತಿ ಪ್ರಕರಣದ ಅಕ್ರಮಕ್ಕೆ ಸಂಬಂಧಿಸಿದಂತೆ 4ನೇ ಬಾರಿ ವಿಚಾರಣೆಗೆ ಹಾಜರಾದ ಅಮೃತ್ ಪೌಲ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ 1ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ಸಿಐಡಿ ಅಧಿಕಾರಿಗಳ ಮನವಿ ಮೇರೆಗೆ ನ್ಯಾಯಾಲಯ 13 ದಿನಗಳ ಕಾಲ ಸಿಐಡಿ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.
ಪಿಎಸ್ ಐ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ವಿರುದ್ಧ ಕಚೇರಿಯಲ್ಲಿಯೇ ಓಎಂಆರ್ ಶೀಟ್ ತಿದ್ದುಪಡಿಗೆ ಅವಕಾಶ ನೀಡಿದ ಹಾಗೂ 25 ಪೋಸ್ಟ್ ಗೆ ತಲಾ 30 ಲಕ್ಷ ರೂಪಾಯಿ ಹಣ ಪಡೆದ ಆರೋಪ ಕೇಳಿಬಂದಿತ್ತು.