ಬೆಂಗಳೂರು : ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಬರೋಬ್ಬರಿ 1 ತಿಂಗಳ ಬಳಿಕ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷರಾಗಿದ್ದು, ವಿದೇಶದಲ್ಲಿ ಕುಳಿತು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದಾರೆ.
ವಿಡಿಯೋದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪ್ರವಾಸ ಹೋಗೋದು ಮೊದಲೇ ನಿಗದಿಯಾಗಿತ್ತು, ಜೆಡಿಎಸ್ ಕಾರ್ಯರ್ತರಿಗೆ, ತಂದೆಗೆ, ತಾತನಿಗೆ ಕ್ಷಮೆ ಕೋರುತ್ತೇನೆ. ಮೇ 31 ಕ್ಕೆ ಎಸ್ ಐಟಿ ಮುಂದೆ ಹಾಜರಾಗುತ್ತೇನೆ ಎಂದು ಪ್ರಜ್ವಲ್ ವಿಡಿಯೋ ಮೂಲಕ ಅವರು ಹೇಳಿಕೊಂಡಿದ್ದಾರೆ.
ವಿಡಿಯೋದಲ್ಲಿ ಪ್ರಜ್ವಲ್ ರೇವಣ್ಣ ಹೇಳಿದ್ದೇನು..?
ಎಲ್ಲರಿಗೂ ನಮಸ್ಕಾರಗಳು ಮೊದಲಿಗೆ ನಾನು ನನ್ನ ತಾತ, ತಂದೆ-ತಾಯಿ, ಜೆಡಿಎಸ್ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಎಲ್ಲಿದ್ದೇನೆ ಎಂದು ಮಾಹಿತಿ ನೀಡಲು ಬಂದಿದ್ದೇನೆ, ನಾನು ಎಲ್ಲಿ ಕೂಡ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೇ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ಕೋರ್ಟ್ –ಕಾನೂನಿನ ಮೇಲೆ ವಿಶ್ವಾಸವಿದೆ ಎಂದು ವಿದೇಶದ ಮೂಲಕ ಪ್ರಜ್ವಲ್ ರೇವಣ್ಣ ವಿಡಿಯೋ ರಿಲೀಸ್ ಮಾಡಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಈ ಬೆನ್ನಲ್ಲೇ ಪ್ರಜ್ವಲ್ ಗೆ ವಿದೇಶಾಂಗ ಸಚಿವಾಲಯದಿಂದ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿತ್ತು.
ಕಾರಣ ಕೇಳಿ ಪ್ರಜ್ವಲ್ ಗೆ ವಿದೇಶಾಂಗ ಸಚಿವಾಲಯದಿಂದ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಅತ್ಯಾಚಾರ ಪ್ರಕರಣ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಆರಂಭಿಸಿತ್ತು. ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡಬೇಕೆಂಬ ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ವಿದೇಶಾಂಗ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿತ್ತು. ಕರ್ನಾಟಕ ಸರ್ಕಾರದಿಂದ ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು ಮಾಡುವ ಬಗ್ಗೆ ಪತ್ರ ಬಂದಿದ್ದು, ಅದರಂತೆ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದರು. ಈ ಎಲ್ಲಾ ಪ್ರಕ್ರಿಯೆಗಳ ನಡುವೆ ಪ್ರಜ್ವಲ್ ಪ್ರತ್ಯಕ್ಷರಾಗಿದ್ದಾರೆ.