alex Certify BIG BREAKING: BBMP ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ; ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಜಂಟಿ ಆಯುಕ್ತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: BBMP ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ; ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಜಂಟಿ ಆಯುಕ್ತ

ಬೆಂಗಳೂರು: ಬಿಬಿಎಂಪಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಹಾಗೂ ಪಿಎ ಇಬ್ಬರನ್ನು ಬಂಧಿಸಿದ್ದಾರೆ.

ಎಸಿಬಿಯಿಂದ ಲೋಕಾಯುಕ್ತಕ್ಕೆ ಕಡತಗಳು ವರ್ಗಾವಣೆಯಾದ ಬೆನ್ನಲ್ಲೇ ಇದೀಗ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ಹಾಗೂ ಪಿಎ ಉಮೇಶ್ 4 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದು, ಇಬ್ಬರನ್ನು ಬಂಧಿಸಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಡಿವೈ ಎಸ್ ಪಿ ಮಂಜಯ್ಯ, ಶಂಕರ ನಾರಾಯಣ ನೇತೃತ್ವದ 8 ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...