
ಬೆಂಗಳೂರು : ಆಕ್ಷೇಪಾರ್ಹ ಹೇಳಿಕೆ ಸಂಬಂಧ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಉಪೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಇಂದು ಹೈಕೋರ್ಟ್ ನಲ್ಲಿ ನಟ ಉಪೇಂದ್ರ ಅವರು ತಮ್ಮ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಟ ಉಪೇಂದ್ರ ವಿರುದ್ಧ ಎಫ್ ಐಆರ್ ದಾಖಲಿಸದಂತೆ ತಡೆ ನೀಡಿದೆ. ಈ ಮೂಲಕ ಉಪೇಂದ್ರಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪೇಂದ್ರ ಅವರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಎಫ್ ಐಆರ್ ಗೆ ತಡೆ ನೀಡಿ ಆದೇಶ ಹೊರಡಿಸಿದೆ.