ಬೆಂಗಳೂರು: ಇಡಿ ದಾಳಿ ವಿಚಾರವಾಗಿ ಮಾತನಾಡಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್, ನನ್ನ ಬೆಳವಣಿಗೆ ಸಹಿಸದೇ ದುರುದ್ದೇಶದಿಂದ ನನ್ನ ಮನೆ ಮೇಲೆ ಇಡಿ ದಾಳಿ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನು ಈ ಮಟ್ಟಕ್ಕೆ ಬೆಳೆಯುತ್ತೇನೆ ಎಂದು ಅವರು ನಿರೀಕ್ಷಿಸಿರಲಿಲ್ಲ. ನನ್ನ ಬೆಳವಣಿಗೆ ಸಹಿಸದೇ ಹಿಂದೆ ನಾನಿದ್ದ ಪಕ್ಷದವರೇ ಈ ದಾಳಿ ಮಾಡಿಸಿದ್ದಾರೆ. ಆದರೆ ಅವರು ಯಾರೆಂದು ನಾನು ಹೆಸರನ್ನು ಹೇಳಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಜೆಡಿಎಸ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ.
ಹಲವು ವರ್ಷಗಳಿಂದ ಬೆತ್ತಲಾಗಿಯೇ ಬದುಕುತ್ತಿದ್ದಾರೆ ಈ ದಂಪತಿ
ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ನನಗೂ ಅಚ್ಚರಿಯಾಯಿತು. ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ಹೀಗೆ ಮಾಡಿಸಿದ್ದಾರೆ. ಅವರೊಬ್ಬರೇ ಬೆಳೆಯಬೇಕು, ಅವರೊಬ್ಬರೇ ಮನೆ ಕಟ್ಟಬೇಕು, ನನ್ನನ್ನು ವೀಕ್ ಮಾಡಬೇಕು ಎಂಬ ಕಾರಣಕ್ಕೆ ಇಡಿ ದಾಳಿ ನಡೆಸಲಾಗಿದೆ. ಆದರೆ ಈ ದಾಳಿಯಿಂದ ನಾನು ಇನ್ನಷ್ಟು ಬಲಿಷ್ಠನಾಗುತ್ತೇನೆ. ಎಲ್ಲವನ್ನೂ ಎದುರಿಸುವ ಶಕ್ತಿ ನನಗಿದೆ. ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ನಾನು ಉತ್ತರಿಸಿದ್ದೇನೆ ಎಂದು ಖಾಸಗಿ ಸುದ್ದಿವಾಹಿನಿಯೊಂದಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.