alex Certify BIG BREAKING: ED ದಾಳಿ; HDK ವಿರುದ್ಧ ಪರೋಕ್ಷ ಅನುಮಾನ ಹೊರಹಾಕಿದ ಜಮೀರ್ ಅಹ್ಮದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ED ದಾಳಿ; HDK ವಿರುದ್ಧ ಪರೋಕ್ಷ ಅನುಮಾನ ಹೊರಹಾಕಿದ ಜಮೀರ್ ಅಹ್ಮದ್

ಬೆಂಗಳೂರು: ಇಡಿ ದಾಳಿ ವಿಚಾರವಾಗಿ ಮಾತನಾಡಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್, ನನ್ನ ಬೆಳವಣಿಗೆ ಸಹಿಸದೇ ದುರುದ್ದೇಶದಿಂದ ನನ್ನ ಮನೆ ಮೇಲೆ ಇಡಿ ದಾಳಿ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ಈ ಮಟ್ಟಕ್ಕೆ ಬೆಳೆಯುತ್ತೇನೆ ಎಂದು ಅವರು ನಿರೀಕ್ಷಿಸಿರಲಿಲ್ಲ. ನನ್ನ ಬೆಳವಣಿಗೆ ಸಹಿಸದೇ ಹಿಂದೆ ನಾನಿದ್ದ ಪಕ್ಷದವರೇ ಈ ದಾಳಿ ಮಾಡಿಸಿದ್ದಾರೆ. ಆದರೆ ಅವರು ಯಾರೆಂದು ನಾನು ಹೆಸರನ್ನು ಹೇಳಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಜೆಡಿಎಸ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ.

ಹಲವು ವರ್ಷಗಳಿಂದ ಬೆತ್ತಲಾಗಿಯೇ ಬದುಕುತ್ತಿದ್ದಾರೆ ಈ ದಂಪತಿ

ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ನನಗೂ ಅಚ್ಚರಿಯಾಯಿತು. ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ಹೀಗೆ ಮಾಡಿಸಿದ್ದಾರೆ. ಅವರೊಬ್ಬರೇ ಬೆಳೆಯಬೇಕು, ಅವರೊಬ್ಬರೇ ಮನೆ ಕಟ್ಟಬೇಕು, ನನ್ನನ್ನು ವೀಕ್ ಮಾಡಬೇಕು ಎಂಬ ಕಾರಣಕ್ಕೆ ಇಡಿ ದಾಳಿ ನಡೆಸಲಾಗಿದೆ. ಆದರೆ ಈ ದಾಳಿಯಿಂದ ನಾನು ಇನ್ನಷ್ಟು ಬಲಿಷ್ಠನಾಗುತ್ತೇನೆ. ಎಲ್ಲವನ್ನೂ ಎದುರಿಸುವ ಶಕ್ತಿ ನನಗಿದೆ. ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ನಾನು ಉತ್ತರಿಸಿದ್ದೇನೆ ಎಂದು ಖಾಸಗಿ ಸುದ್ದಿವಾಹಿನಿಯೊಂದಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...