alex Certify BIG BREAKING : ಭೋಪಾಲ್ ಬಳಿ ವಂದೇ ಭಾರತ್ ರೈಲಿನಲ್ಲಿ ಬೆಂಕಿ : ಪ್ರಯಾಣಿಕರು ಸುರಕ್ಷಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING : ಭೋಪಾಲ್ ಬಳಿ ವಂದೇ ಭಾರತ್ ರೈಲಿನಲ್ಲಿ ಬೆಂಕಿ : ಪ್ರಯಾಣಿಕರು ಸುರಕ್ಷಿತ

ಭೋಪಾಲ್: ಇಂದು ಬೆಳ್ಳಂಬೆಳಗ್ಗೆ ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಭೋಪಾಲ್ನಿಂದ ದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಬೋಗಿಗೆ ಸೋಮವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಈ ಹಿಂದೆ ಹಬೀಬ್ಗಂಜ್ ಎಂದು ಕರೆಯಲ್ಪಡುತ್ತಿದ್ದ ರಾಣಿ ಕಮಲಾಪತಿ ನಿಲ್ದಾಣದಿಂದ ನವದೆಹಲಿಯ ನಿಜಾಮುದ್ದೀನ್ ರೈಲು ನಿಲ್ದಾಣದ ಕಡೆಗೆ ರೈಲು ಹೊರಟಾಗ ಬೆಂಕಿ ಕಾಣಿಸಿಕೊಂಡಿದೆ.

ಕುರ್ವಾಯಿ ನಿಲ್ದಾಣದ ಬಳಿಯ ರೈಲಿನ ಬೋಗಿ ಸಂಖ್ಯೆ 14 ರಲ್ಲಿ ಬ್ಯಾಟರಿಯಲ್ಲಿನ ಕಿಡಿಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಅಧಿಕಾರಿಗಳ ತಂಡವನ್ನು ತಕ್ಷಣ ಸ್ಥಳಕ್ಕೆ ಆಗಮಿಸಿದ್ದು, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...