
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಭೀಕರ ಮರ್ಡರ್ ನಡೆದಿದ್ದು, ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಯಾದವರನ್ನು ಹಸೀನಾ, ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21) ಮತ್ತು ಅಸೀಮ್(14) ಎಂದು ಗುರುತಿಸಲಾಗಿದೆ.