ಬೆಂಗಳೂರು : 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪಿಎಸ ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ ಮರುಪರೀಕ್ಷೆಗೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಪಿಎಸ್ ಐ ನೇಮಕಾತಿ ಅಕ್ರಮ ಹಿನ್ನೆಲೆಯಲ್ಇ ಹೊಸಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಅದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ಕುರಿತು ತೀರ್ಪನ್ನು ಹೈಕೋರ್ಟ್ ಪ್ರಕಟಿಸಿದ್ದು, ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ.
ಸರ್ಕಾರದ ಅದೇಶ ಕೋರಿ ಎನ್.ವಿ. ಚಂದನ್ ಸೇರಿದಂತೆ ಪಿಎಸ್ ಐ ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ 100 ಅಧಿಕ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆಯನ್ನು 2023 ರ ಅ. 26 ರಂದು ಪೂರ್ಣಗೊಳಿಸಲಾಗಿತ್ತು. ಇಂದು ತೀರ್ಪನ್ನು ಪ್ರಕಟಿಸಿರುವ ಹೈಕೋರ್ಟ್ ಸ್ವತಂತ್ರ ಸಂಸ್ಥೆಯಿಂದ ಪಿಎಸ್ ಮರುಪರೀಕ್ಷೆಗೆ ಹೈಕೋರ್ಟ್ ಸೂಚನೆ ನೀಡಿದೆ.