ನವದೆಹಲಿ : ಇಂಡಿಯಾ ಮೈತ್ರಿಕೂಟದ ವಿರೋಧ ಪಕ್ಷಗಳ ಪರವಾಗಿ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಸರ್ಕಾರದ ವಿರುದ್ಧ ಮಂಡಿಸಿದ ಅವಿಶ್ವಾಸ ಗೊತ್ತುವಳಿಯನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಬುಧವಾರ ಅಂಗೀಕರಿಸಿದ್ದಾರೆ.
ಗೊಗೊಯ್ ಅವರು ಗೊತ್ತುವಳಿಯನ್ನು ಮಂಡಿಸಿದ ನಂತರ, ಸ್ಪೀಕರ್ ಅವರು ನಿರ್ಣಯವನ್ನು ಬೆಂಬಲಿಸುವ ಸದಸ್ಯರ ಸಂಖ್ಯೆಯ ಬಗ್ಗೆ ಕೇಳಿದರು. ಅವರು ಗೊತ್ತುವಳಿಯನ್ನು ಒಪ್ಪಿಕೊಂಡರು ಮತ್ತು ಚರ್ಚೆಯ ಸಮಯವನ್ನು ನಂತರ ನಿರ್ಧರಿಸಲಾಗುವುದು ಎಂದು ಹೇಳಿದರು.
ಅವಿಶ್ವಾಸ ಗೊತ್ತುವಳಿಯ ಬೇಡಿಕೆಯನ್ನು ಸ್ಪೀಕರ್ ಒಪ್ಪಿಕೊಂಡ ನಂತರ ಸದನವು ತನ್ನ ಸಾಮಾನ್ಯ ಕಾರ್ಯಚಟುವಟಿಕೆಯನ್ನು ಪುನರಾರಂಭಿಸಿತು. ಸರ್ಕಾರ ಮಂಡಿಸುತ್ತಿರುವ ಮಸೂದೆಗಳ ಬಗ್ಗೆ ವಿರೋಧ ಪಕ್ಷದ ಸದಸ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಎನ್‌ಡಿಎ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪಣ ತೊಟ್ಟಿರುವ ‘ಇಂಡಿಯಾ’ವು, ಲೋಕಸಭೆಯಲ್ಲಿ ಇಂದು ಅವಿಶ್ವಾಸ ನಿರ್ಣಯ ಮಂಡಿಸಲು ಸ್ಪೀಕರ್‌ಗೆ ಕಾಂಗ್ರೆಸ್ ಪ್ರಸ್ತಾವನೆ ಸಲ್ಲಿಸಿತ್ತು.