alex Certify BIG BREAKING NEWS: ಒಂದೇ ದಿನದಲ್ಲಿ 8,834 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 24 ಗಂಟೆಯಲ್ಲಿ 211 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಒಂದೇ ದಿನದಲ್ಲಿ 8,834 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 24 ಗಂಟೆಯಲ್ಲಿ 211 ಜನ ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 8,834 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಇನ್ನು ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 211 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 473537 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 98416 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8834 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34069608 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 8,86,263 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 24,55,911 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,27,93,09,669 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...