alex Certify BIG BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಗಂಟೆಯಲ್ಲಿ 36,385 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಗಂಟೆಯಲ್ಲಿ 36,385 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ 42,618 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ 3,29,45,907ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 330 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 440225ಕ್ಕೆ ಏರಿಕೆಯಾಗಿದೆ.

ರುಚಿ ರುಚಿ ಸೀತಾಫಲ ಸೇವಿಸಿ ‘ಆರೋಗ್ಯ’ ಕಾಪಾಡಿಕೊಳ್ಳಿ

ಇನ್ನು ದೇಶದಲ್ಲಿ 405681 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 36385 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32100001 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 17,04,970 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 58,85,687 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 67,72,11,205 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...