alex Certify BIG BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಮಹಾಮಾರಿಗೆ ಬಲಿಯಾದವರ ಸಂಖ್ಯೆ 47,4,111 ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಮಹಾಮಾರಿಗೆ ಬಲಿಯಾದವರ ಸಂಖ್ಯೆ 47,4,111 ಕ್ಕೆ ಏರಿಕೆ

ನವದೆಹಲಿ: ಒಮಿಕ್ರಾನ್ ಭೀತಿ ನಡುವೆಯೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 9,419 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 159 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 474111 ಕ್ಕೆ ಏರಿಕೆಯಾಗಿದೆ.

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ನೂ 3 ವರ್ಷ ಪ್ರಧಾನ ಮಂತ್ರಿ ಆವಾಸ್ ಯೋಜನೆ ವಿಸ್ತರಣೆ

ಇನ್ನು ದೇಶದಲ್ಲಿ 94742 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8251 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34097388 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 12,89,983 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 80,86,910 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,30,39,32,286 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...