alex Certify BIG BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ 1.1 ಲಕ್ಷ ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಕಳೆದ ಒಂದು ತಿಂಗಳಲ್ಲಿಯೇ ಪತ್ತೆಯಾದ ಅತಿ ಕಡಿಮೆ ಕೇಸ್ ಇದಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 865 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 501979 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1225011 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 213246 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 40461148 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 45,10,770 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,69,46,26,697 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 14,48,513 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...