alex Certify BIG BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ; 24 ಗಂಟೆಯಲ್ಲಿ 83,876 ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ; 24 ಗಂಟೆಯಲ್ಲಿ 83,876 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತವಾಗಿದ್ದು, ಪ್ರತಿ ದಿನ 1 ಲಕ್ಷಕ್ಕೂ ಅಧಿಕ ದಾಖಲಾಗುತ್ತಿದ್ದ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಕಳೆದ 24 ಗಂಟೆಯಲ್ಲಿ 83,876 ಜನರಲ್ಲಿ ಸೋಂಕು ಪತ್ತೆಯಾಗಿದ್ದು

ಆದರೆ ಸೋಂಕಿತರ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 895 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 502874ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1108938 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 199054 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 40660202 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 14,70,053 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,69,63,80,755 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 11,56,363 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...