ನವದೆಹಲಿ: ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ.
ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ.
ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪಿಎಫ್ಐ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಎನ್ಐಎ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು. ಅಲ್ಲದೆ, ಸಂಘಟನೆಗೆ ಸೇರಿದ ಹಲವು ಮುಖಂಡರು, ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಪಿಎಫ್ಐಗೆ ಮತ್ತೊಂದು ಶಾಕ್ ನೀಡಲಾಗಿದ್ದು, ಐದು ವರ್ಷ ಬ್ಯಾನ್ ಮಾಡಲಾಗಿದೆ.