ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ 2022 ರ NEET PG ಪರೀಕ್ಷೆಯನ್ನು 6 ರಿಂದ 8 ವಾರಗಳ ಕಾಲ ಮುಂದೂಡಿ ಆದೇಶ ಹೊರಡಿಸಿದೆ.
ಈ ಪರೀಕ್ಷೆಗಳನ್ನು ಮಾರ್ಚ್ 12 ರಂದು ನಡೆಯಲು ನಿಗದಿಪಡಿಸಲಾಗಿದ್ದು, ಇದೀಗ 6 ರಿಂದ 8 ವಾರಗಳ ಕಾಲ ಮುಂದೂಡಿಕೆಯಾಗಿದೆ.
ಪರಿಷ್ಕೃತ ವೇಳಾಪಟ್ಟಿ ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.
ಕೊರೊನಾ ಮೂರನೇ ಅಲೆ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗಿದೆ.