alex Certify BIG BREAKING NEWS: ಮತ್ತಷ್ಟು ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಒಂದೇ ದಿನದಲ್ಲಿ 871 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಮತ್ತಷ್ಟು ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಒಂದೇ ದಿನದಲ್ಲಿ 871 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ 2,35,532 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.13.39ಕ್ಕೆ ಇಳಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. 24 ಗಂಟೆಯಲ್ಲಿ 871 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 493198ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2004333 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 335939 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 38024771 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 56,72,766 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,65,04,87,260 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 17,59,434 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...