alex Certify BIG BREAKING NEWS: ಮತ್ತೆ 8,774 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ; ಒಂದೇ ದಿನ 621 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಮತ್ತೆ 8,774 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ; ಒಂದೇ ದಿನ 621 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದರೂ ನಿನ್ನೆಗಿಂತ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಮತ್ತೆ 8,774 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಇನ್ನು ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 621 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 468554 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 105691 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9481 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33998278 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 10,91,236 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 82,86,058 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,21,94,71,134 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...