alex Certify BIG BREAKING NEWS: ವೇಗವಾಗಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ವೇಗವಾಗಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆ

ನವದೆಹಲಿ: ದೇಶದಲ್ಲಿ ಕೋವಿಡ್ ಮೂರನೇ ಅಲೆ ಅಟ್ಟಹಾಸ ತಗ್ಗಿದ್ದು, ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 67,597 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಆದರೆ ಸೋಂಕಿತರ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, 24 ಗಂಟೆಯಲ್ಲಿ 1188 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 504062ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 994891 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 180456 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 40840658 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 55,78,297 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,70,21,72,615 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 13,46,534 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...