alex Certify BIG BREAKING NEWS: ಹೊಸ ದಾಖಲೆ ಬರೆದ ಕೋವಿಡ್ ಕೇಸ್; 558 ದಿನಗಳಲ್ಲೇ ಅತಿ ಕಡಿಮೆ ಸೋಂಕಿತರು ಪತ್ತೆ; 24 ಗಂಟೆಯಲ್ಲಿ 10,004 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಹೊಸ ದಾಖಲೆ ಬರೆದ ಕೋವಿಡ್ ಕೇಸ್; 558 ದಿನಗಳಲ್ಲೇ ಅತಿ ಕಡಿಮೆ ಸೋಂಕಿತರು ಪತ್ತೆ; 24 ಗಂಟೆಯಲ್ಲಿ 10,004 ಜನರು ಡಿಸ್ಚಾರ್ಜ್

ನವದೆಹಲಿ: ಒಮಿಕ್ರಾನ್ ಭೀತಿ ನಡುವೆಯೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 6,822 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದು ಕಳೆದ 558 ದಿನಗಳಲ್ಲೇ ಪತ್ತೆಯಾದ ಅತಿ ಕಡಿಮೆ ಪ್ರಕರಣಗಳಾಗಿವೆ.

ಇನ್ನು ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 220 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 473757 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 95014 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 10004 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34079612 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 10,79,384 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 79,39,038 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,28,76,10,590 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...