
ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿಗೆ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ವೇಳಾಪಟ್ಟಿ ಪ್ರಕಟಿಸಿದ್ದಾರೆ.
ಮೇ 4 ರಂದು ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ಆರಂಭವಾಗಲಿದೆ. ಮೇ ನಾಲ್ಕರಿಂದ ಜೂನ್ 10 ರವರೆಗೆ ಸಿಬಿಎಸ್ಇ 10 ಮತ್ತು 12ನೇ ತರಗತಿಗೆ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ, ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಎರಡು ಪಾಳಿಯಲ್ಲಿ ಪರೀಕ್ಷೆ ನಡೆಯಲಿದೆ.