alex Certify BIG BREAKING: PSI ಅಕ್ರಮದ ಕಿಂಗ್ ಪಿನ್ ಮಂಜುನಾಥ್ ಮೇಳಕುಂದಿ CIDಗೆ ಶರಣಾಗತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: PSI ಅಕ್ರಮದ ಕಿಂಗ್ ಪಿನ್ ಮಂಜುನಾಥ್ ಮೇಳಕುಂದಿ CIDಗೆ ಶರಣಾಗತಿ

ಲಬುರ್ಗಿ: 545 ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ಮಂಜುನಾಥ್ ಮೇಳಕುಂದಿ ಸಿಐಡಿ ಪೊಲೀಸರಿಗೆ ಶರಣಾಗಿದ್ದಾನೆ.

ಪ್ರಕರಣ ನಡೆದು 20 ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಂಜುನಾಥ್ ಮೇಳಕುಂದಿ ಇಂದು ತಾನಾಗಿಯೇ ಆಟೋದಲ್ಲಿ ಕಲಬುರ್ಗಿ ಸಿಐಡಿ ಕಚೇರಿಗೆ ಬಂದು ಶರಣಾಗಿದ್ದಾನೆ.

ನೀರಾವರಿ ಇಲಾಖೆಯ ಇಂಜಿನಿಯರ್ ಆಗಿರುವ ಮಂಜುನಾಥ್ ಮೇಳಕುಂದಿ ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಓಎಂಆರ್ ಶೀಟ್ ಅಕ್ರಮದ ಕಿಂಗ್ ಪಿನ್ ಎಂದು ಹೇಳಲಾಗುತ್ತಿದೆ.

ಕಳೆದ 20 ದಿನಗಳಿಂದ ನಾಪತ್ತೆಯಾಗಿದ್ದ ಮಂಜುನಾಥ್ ಗಾಗಿ ಸಿಐಡಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ ಕಲಬುರ್ಗಿ ಸಿಐಡಿ ಕಚೇರಿ ಎದುರು ಪ್ರತ್ಯಕ್ಷನಾಗಿರುವ ಮಂಜುನಾಥ್, ಪೊಲೀಸರಿಗೆ ಶರಣಾಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...