ಬೆಂಗಳೂರು: ತೆಂಗು ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪ್ರತಿಕ್ವಿಂಟಾಲ್ ಕೊಬ್ಬರಿಗೆ 1,250 ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ಸಚಿವ ಶಿವನಾಂದ ಪಾಟೀಲ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಶಿವಾನಂದ ಪಾಟೀಲ್, ರಾಜ್ಯ ಸರ್ಕಾರವು ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 1,250 ರೂ. ಪ್ರೋತ್ಸಾಹಧನ ನೀಡುತ್ತೇವೆ. ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಸಹಿತ ಕೊಬ್ಬರಿ ಕ್ವಿಂಟಲ್ ಗೆ 1,250ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.
15 ರಿಂದ 20 ಸಾವಿರ ರೂ.ಗಳ ಆಸುಪಾಸಿನಲ್ಲಿ ಇರುತ್ತಿದ್ದ ಕ್ವಿಂಟಾಲ್ ಕೊಬ್ಬರಿ ಬೆಲೆ ಕಳೆದ ಜನವರಿ ತಿಂಗಳಲ್ಲಿ ಕೇಂದ್ರ ಸರಕಾರ ನಿಗದಿಪಡಿಸಿರುವ ಬೆಂಬಲ ಬೆಲೆ 11,750 ರೂ.ಗಿಂತ ಕೆಳಗಿಳಿದಿದೆ. ಈ ಹಿನ್ನೆಲೆಯಲ್ಲಿ ಕೊಬ್ಬರಿಗೆ ಪ್ರೋತ್ಸಾಹಧನ ನೀಡುವಂತೆ ಒತ್ತಾಯಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರವು ಕೊಬ್ಬರಿಗೆ 1,250 ರೂ. ಪ್ರೋತ್ಸಾಹಧ ಘೋಷಿಸಿದೆ.