ಬೆಂಗಳೂರು : ರಾಜ್ಯದಲ್ಲಿ ತೀವ್ರ ವಿದ್ಯುತ್ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಸ್ವಾಮ್ಯದ ತೆಹ್ರಿ ಹೈಡ್ರೋ ಡೆವಲಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡೆ (THDCL) ಜೊತೆಗೆ ಸುಮಾರು 15,000 ಕೋಟಿ ರೂ.ಮೊತ್ತದ ಒಪ್ಪಂದಕ್ಕೆ ಸಹಿ ಹಾಕಿದೆ.
ಇಂಧನ ಸಚಿವ ಕೆ.ಜೆ. ಜಾರ್ಜ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ,ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹಾಗೂ ಟಿಹೆಚ್‌ಡಿಸಿಎಲ್ ತಾಂತ್ರಿಕ ನಿರ್ದೇಶಕ ಭೂಪೇಂದ್ರ ಗುಪ್ತ ಅವರು ಒಪ್ಪಂದ ಪತ್ರಕ್ಕೆ ಸಹಿ ಹಾಕಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪಂಪ್ಡ್ ಸ್ಟೋರೇಜ್, ಹೈಡ್ರೋ, ಸೋಲಾರ್ ಸೇರಿದಂತೆ 15,000 ಕೋಟಿ ರೂ. ಮೊತ್ತದ ವಿವಿಧ ವಿದ್ಯುತ್ ಯೋಜನೆಗಳನ್ನು ಕೈಗೊಳ್ಳುಲಿದೆ.
ರಾಜ್ಯದಲ್ಲಿ ವಿದ್ಯುತ್ ಕೊರತೆ ನೀಗಿಸುವ ಸಂಬಂಧ ಪರಿಹಾರಕ್ಕಾಗಿ ಕೇಂದ್ರ ಇಂಧನ ಸಚಿವ ಆರ್. ಕೆ. ಸಿಂಗ್ ಹಾಗೂ ಕೆ.ವಿಷ್ಣೋಯ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ವಿದ್ಯುತ್ ಪೂರೈಸುವ ಸಂಬಂಧ ಟಿಹೆಚ್ ಡಿಸಿಎಲ್ ಭರವಸೆ ನೀಡಿತ್ತು. ಅದರಂತೆ ಇಂದು ಒಪ್ಪಂದಕ್ಕೆ ಸಹಿ ಹಾಕಲಾಗಿದೆ.