ನವದೆಹಲಿ : ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಹಾಗೂ ಮಣಿಪುರ ಸರ್ಕಾರಕ್ಕೆ ಮಹತ್ವದ ಸೂಚನೆಗಳನ್ನು ನೀಡಿದೆ.
ಇಂದು ಸಂತ್ರಸ್ತ ಮಹಿಳೆಯರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ ಸಂಬಂಧ ಸರ್ಕಾರ ಕೈಗೊಂಡ ಕ್ರಮಗಳ ವರದಿ ನೀಡಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಮಣಿಪುರ ಘಟನೆ ಸಂಬಂಧ ಕೇಂದ್ರ ಸರ್ಕಾರ ಮತ್ತು ಮಣಿಪುರ ಸರ್ಕಾರ ಈವರೆಗೆ ನಡೆಸಿರುವ ತನಿಖಾ ವರದಿಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಈವರೆಗೆ ಎಷ್ಟು ಎಫ್ ಐಆರ್ ಗಳು ದಾಖಲು ಮಾಡಿದ್ದೀರಾ? ನಂತರ ಮಹಿಳೆಯರ ರಕ್ಷಣೆಗೆ ಏನು ಕ್ರಮ ಕೈಗೊಂಡಿದ್ದೀರಾ? ಈ ಎಲ್ಲಾದರ ಬಗ್ಗೆ ಮಾಹಿತಿ ನೀಡಲು ಸಿಜೆಐ ಪೀಠ ತಿಳಿಸಿದೆ.