ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಈಗ ಮತ್ತೊಂದು ತಿರುವು ಸಿಕ್ಕಿದ್ದು, ವಿಧಾನಸಭಾ ಡೆಪ್ಯೂಟಿ ಸ್ಪೀಕರ್ ನರಹರಿ ಜಿರ್ವಾಲ್, ಶಿವಸೇನೆ ಸಲ್ಲಿಸಿರುವ ಮನವಿ ಆಧಾರದ ಮೇಲೆ ನಿಮ್ಮನ್ನು ಅನರ್ಹಗೊಳಿಸಬಾರದೇಕೆ ಎಂದು ಪ್ರಶ್ನಿಸಿ 16 ಮಂದಿ ಶಾಸಕರಿಗೆ ನೋಟಿಸ್ ನೀಡಿದ್ದಾರೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನೀಡಿದ್ದರೂ ಸಹ ಗೈರುಹಾಜರಾದ ಕಾರಣ ಇವರುಗಳ ಅನರ್ಹತೆಗೆ ಮನವಿ ಮಾಡಲಾಗಿತ್ತು.
ಈ ಮನವಿ ಕುರಿತಂತೆ ನ್ಯಾಯಾಂಗ ತಜ್ಞರಿಂದ ಮಾಹಿತಿ ಪಡೆದುಕೊಂಡ ಬಳಿಕ ಡೆಪ್ಯೂಟಿ ಸ್ಪೀಕರ್ ನರಹರಿ ಈ ಕ್ರಮಕ್ಕೆ ಮುಂದಾಗಿದ್ದಾರೆ. ಏಕನಾಥ್ ಶಿಂಧೆ ಜೊತೆಗೆ 40ಕ್ಕೂ ಅಧಿಕ ಶಾಸಕರಿದ್ದರೂ ಸಹ ಕೇವಲ 16 ಮಂದಿಯನ್ನು ಗುರಿಯಾಗಿಸಿಕೊಂಡು ನೋಟಿಸ್ ನೀಡಲಾಗಿದೆ.