ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಇಳಿಮುಖವಾಗಿದ್ದು, ಶಿಕ್ಷಣ ಇಲಾಖೆಯು ಬೇಸಿಗೆ ರಜೆ ಮತ್ತು ಮುಂದಿನ ಶೈಕ್ಷಣಿಕ ಕಾರ್ಯಕ್ರಮಗಳ ಬಗ್ಗೆ ಯೋಜಿಸುತ್ತಿದೆ. ಈ ವರ್ಷ ಶಾಲೆಗಳ ಬೇಸಿಗೆ ರಜೆಯಲ್ಲಿ ದೊಡ್ಡ ಬದಲಾವಣೆ ಮಾಡಲಿದ್ದು, ಏಪ್ರಿಲ್ 10 ರಿಂದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಿಗೆ ಬೇಸಿಗೆ ರಜೆ ಘೋಷಿಸಲಾಗಿದೆ.
ಕೋವಿಡ್-19 ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬೇಸಿಗೆ ರಜೆಯನ್ನು ಶಿಕ್ಷಣ ಇಲಾಖೆ ಕಡಿತಗೊಳಿಸಿದೆ. ಏಪ್ರಿಲ್ 10 ರಿಂದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಿಗೆ ಬೇಸಿಗೆ ರಜೆ ಘೋಷಿಸಲಾಗಿದೆ. ಮೇ 16 ರಿಂದ ಮುಂದಿನ ಶೈಕ್ಷಣಿಕ ಆರಂಭವಾಗಲಿದೆ.
ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮೇ 16ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಅಧಿಕೃತ ಆದೇಶ ಹೊರಡಿಸಿದ್ದು, ಸುಮಾರು 15 ದಿನಗಳ ಕಾಲ ಶಿಕ್ಷಣ ಇಲಾಖೆ ಮುಂದಿನ ಶೈಕ್ಷಣಿಕ ವರ್ಷದ ಕಲಿಕಾ ಪುನಶ್ಚೇತನ ಕಾರ್ಯಕ್ರಮ ನಡೆಸುತ್ತಿದೆ. ಪ್ರಸಕ್ತ ಶೈಕ್ಷಣಿಕ ವರ್ಷವು ಏಪ್ರಿಲ್ 9 ಕ್ಕೆ ಕೊನೆಗೊಳ್ಳಲಿದೆ.
ಏಪ್ರಿಲ್ 10 ರಿಂದ ಬೇಸಿಗೆ ರಜೆ ಆರಂಭವಾಗಲಿದ್ದು, ಮುಂದಿನ ಶೈಕ್ಷಣಿಕ ವರ್ಷ ಇದೇ ಮೇ 16ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಪ್ರಸಕ್ತ ಸಾಲಿನ ಪರೀಕ್ಷೆಗಳನ್ನು ನಿಗದಿತ ದಿನಾಂಕದೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಕಳೆದ ಎರಡು ವರ್ಷಗಳಿಂದ ಕೊರೊನಾದಿಂದ ಶಿಕ್ಷಣ ಕ್ಷೇತ್ರ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸರಿಯಾದ ಸಮಯಕ್ಕೆ ಪಾಠವಿಲ್ಲ. ಪರೀಕ್ಷೆಗಳು ಸರಿಯಾದ ಸಮಯಕ್ಕೆ ನಡೆಯಲಿಲ್ಲ. ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮತ್ತು ಪಿಯುಸಿ ಅಂತಿಮ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ದೈಹಿಕ ತರಗತಿಗಳ ಪ್ರಾರಂಭದಲ್ಲಿನ ವಿಳಂಬ ಮತ್ತು ಆನ್‌ಲೈನ್ ತರಗತಿಗಳ ಸಮಯದಲ್ಲಿ ನೆಟ್‌ವರ್ಕ್ ಸಮಸ್ಯೆಗಳನ್ನು ಪರಿಗಣಿಸಿ, ಈ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆಗಳಲ್ಲಿ 75% ಹಾಜರಾತಿಯನ್ನು ಕಡ್ಡಾಯಗೊಳಿಸದಿರಲು ಇಲಾಖೆ ನಿರ್ಧರಿಸಿದೆ.
ಈ ಕುರಿತು ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, ಈ ವರ್ಷ ಶೇ.75ರಷ್ಟು ಹಾಜರಾತಿ ಕಡ್ಡಾಯವಲ್ಲ. ಈ ಕುರಿತು ಕಾಲೇಜು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.