alex Certify ಬೆಂಗಳೂರಲ್ಲಿ ‘CCB’ ಪೊಲೀಸರ ಭರ್ಜರಿ ಬೇಟೆ : 2 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ‘CCB’ ಪೊಲೀಸರ ಭರ್ಜರಿ ಬೇಟೆ : 2 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು : ಬೆಂಗಳೂರಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು, 2.04 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ದೊಡ್ಡನಾಗಮಂಗಲದ ವೀರಭದ್ರಸ್ವಾಮಿ ಲೇಔಟ್ ನಲ್ಲಿ ಕೋಟ್ಯಾಂತರ ರೂ ಮಾದಕ ವಸ್ತು ಪತ್ತೆಯಾಗಿದೆ.

ನೈಜೀರಿಯಾ ಮೂಲದ ವಿಕ್ಟರ್ ಒಬಿನ್ನಾ ಚುಕ್ವುಡಿ ಎಂಬಾತ ಮನೆಯಲ್ಲಿ ಡ್ರಗ್ಸ್ ಸಂಗ್ರಹಿಸಿಡಲಾಗಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ. ಈ ಸಂಬಂಧ ವಿಕ್ಟರ್ ಒಬಿನ್ನಾ ಚುಕ್ವುಡಿಯನ್ನು ಬಂಧಿಸಿದ್ದಾರೆ, ಆತನಿಂದ ಮೊಬೈಲ್ ಹಾಗೂ ಒಂದು ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಸಾಂದರ್ಭಿಕ ಚಿತ್ರ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...