ಶಿವಮೊಗ್ಗ : ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಶಿವಮೊಗ್ಗದಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, 1.01 ಕೋಟಿ ಮೌಲ್ಯದ ಬಟ್ಟೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಕೆಆರ್ ಪುರಂನಲ್ಲಿರುವ ಡಿಲಕ್ಸ್ ಲಾಜಿಸ್ಟಿಕ್ ಕೋರಿಯರ್ ಗೋದಾಮಿನ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದಾಗ ದಾಖಲೆ ಇಲ್ಲದ ಬಟ್ಟೆ ಸಂಗ್ರಹಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಸುಮಾರು 1 ಕೋಟಿ 1ಲಕ್ಷ ಮೌಲ್ಯದ ಬಟ್ಟೆಗಳನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು, ಚುನಾವಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಬಟ್ಟೆಗಳನ್ನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ಮುಂದುವರೆದಿದೆ.