ಬೆಂಗಳೂರು: ಆಗಸ್ಟ್ 23 ರಿಂದ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು. 9, 10ನೇ ತರಗತಿ ಮತ್ತು ಪಿಯುಸಿ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.
ಕೊರೋನಾ ನಿಯಂತ್ರಣಕ್ಕೆ ತಜ್ಞರು ಸಲಹೆ ನೀಡಿದ್ದು, ಮಾರ್ಗಸೂಚಿಗಳ ಪಾಲನೆಗೆ ತಿಳಿಸಲಾಗಿದೆ. ಇದರೊಂದಿಗೆ ಮೊದಲ ಹಂತದಲ್ಲಿ ಆಗಸ್ಟ್ 23ರಿಂದ 9.10 ನೇತರಗತಿ, ಪಿಯುಸಿ ತರಗತಿಗಳನ್ನು ಆರಂಭಿಸಲು ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ.
ವಿದ್ಯಾರ್ಥಿಗಳು ಗುಂಪು ಗುಂಪಾಗಿ ಬರುವುದನ್ನು ತಡೆಯಲು ಮತ್ತು ವಿದ್ಯಾರ್ಥಿಗಳ ದಟ್ಟಣೆ ಕಡಿಮೆ ಮಾಡಲು ದಿನಬಿಟ್ಟು ದಿನ ತರಗತಿ ನಡೆಸಲು ಸೂಚಿಸಲಾಗಿದೆ. ಕೊರೊನಾ ಪರಿಸ್ಥಿತಿ ಆಧರಿಸಿ ಪ್ರಾಥಮಿಕ ಶಾಲೆ ಹಾಗೂ ಆರರಿಂದ ಎಂಟನೇ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಈ ತಿಂಗಳ ಅಂತ್ಯಕ್ಕೆ ತೀರ್ಮಾನಿಸಲಾಗುವುದು ಎಂದು ಹೇಳಲಾಗಿದೆ.