ಬೆಂಗಳೂರು: ಅಮರನಾಥ ಯಾತ್ರೆಗೆ ತೆರಳಿರುವ ರಾಜ್ಯದ ಯಾತ್ರಾರ್ಥಿಗಳ ಸುರಕ್ಷತೆ ವಿಚಾರ ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪವಾಗಿದ್ದು, ಕನ್ನಡಿಗ ಯಾತ್ರಿಕರು ಸುರಕ್ಷಿತರಾಗಿದ್ದಾರೆ ಎಂದು ಶಾಸಕ ಬಾಲಕೃಷ್ಣ ಮಾಹಿತಿ ನೀಡಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ಬಾಲಕೃಷ್ಣ, ಜಮ್ಮು-ಕಾಶ್ಮೀರದಲ್ಲಿ ಸಿಲುಕಿರುವ ಯಾತ್ರಿಕರು ಸುರಕ್ಷಿತರಾಗಿದ್ದಾರೆ. ಬುಧವಾರದವರೆಗೂ ಆರ್ಮಿ ಕ್ಯಾಂಪ್ ನಲ್ಲಿರಲು ಅವಕಾಶವಿದೆ. ಬುಧವಾರ ರಸ್ತೆಯಲ್ಲಿ ಬಿದ್ದಿರುವ ಮಣ್ಣು ತೆರವು ಕಾರ್ಯ ನಡೆಯಲಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಸಂಬಂಧಿಕರು ಮಾಹಿತಿ ನೀಡಿದರೆ ಯಾತ್ರಾರ್ಥಿಗಳ ಸಂಪರ್ಕಕ್ಕೆ ಪ್ರಯತ್ನಿಸಲಾಗುವುದು ಎಂದರು.
ಈಗಾಗಲೇ ನಮ್ಮ ರಾಜ್ಯದ ನಾಲ್ಕು ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿದೆ. ಕನ್ನಡಿಗರು ಸುರಕ್ಷಿತರಾಗಿದ್ದಾರೆ ಎಂದು ಹೇಳಿದರು.