
ಹೈದರಾಬಾದ್: ಬಹುಭಾಷಾ ನಟ, ಅಮೃತವರ್ಷಿಣಿ ಖ್ಯಾತಿಯ ಹಿರಿಯ ನಟ ಶರತ್ ಬಾಬು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶರತ್ ಬಾಬು ಚಿಕಿತ್ಸೆಗಾಗಿ ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶರತ್ ಬಾಬು ಹೈದರಾಬಾದ್ ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಕಳೆದ ಒಂದು ತಿಂಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆಂಧ್ರಪ್ರದೇಶದ ಅಮದಾಲವಲಸದ ಮೂಲದ ಸತ್ಯಂ ಬಾಬು ಚಿತ್ರರಂಗ ಪ್ರವೇಶದ ಬಳಿಕ ಶರತ್ ಬಾಬು ಆಗಿ ಜನಪ್ರಿಯರಾದರು.
40 ವರ್ಷಗಳ ಕಾಲ ಚಿತ್ರರಂಗದಲ್ಲಿ ಅಭಿನಯಿಸಿದ್ದ ಶರತ್ ಬಾಬು ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು.