alex Certify BIG NEWS: ʼಕರ್ನಾಟಕ ರತ್ನʼ ಪ್ರಶಸ್ತಿ ಪ್ರದಾನಕ್ಕೆ ನನ್ನನ್ನು ಆಹ್ವಾನಿಸಿಲ್ಲ; ಅದಕ್ಕೆ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ ಎಂದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ʼಕರ್ನಾಟಕ ರತ್ನʼ ಪ್ರಶಸ್ತಿ ಪ್ರದಾನಕ್ಕೆ ನನ್ನನ್ನು ಆಹ್ವಾನಿಸಿಲ್ಲ; ಅದಕ್ಕೆ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿರುವುದು ಸಂತಸದ ವಿಚಾರ. ಆದರೆ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ, ಹಾಗಾಗಿ ನಾನು ಹೋಗುತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿದ್ದಾರೆ. ಆದರೆ ಅಧಿಕೃತವಾಗಿ ನನಗೆ ಆಹ್ವಾನ ನೀಡಿಲ್ಲ. ವಿಪಕ್ಷ ನಾಯಕನಿಗೆ ಶಿಷ್ಠಾಚಾರವಿರುತ್ತದೆ. ಸರ್ಕಾರದಿಂದ ಅಧಿಕೃತವಾಗಿ ಆಹ್ವಾನಿಸಬೇಕು. ಆಹ್ವಾನ ನೀಡಿದರೆ ಕಾರ್ಯಕ್ರಮಕ್ಕೆ ಹೋಗೋಣ ಎಂದುಕೊಂಡಿದ್ದೆ. ಆದರೆ ಆಹ್ವಾನ ನೀಡಿಲ್ಲ. ಹಾಗಾಗಿ ಹೋಗುತ್ತಿಲ್ಲ ಎಂದರು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕನ್ನಡ ರತ್ನ ಪ್ರಶಸ್ತಿ ನೀಡುತ್ತಿರುವುದು ಖುಷಿಯ ವಿಚಾರ. ಪುನೀತ್ ಎಲ್ಲರಿಗೂ ಅಚ್ಚುಮೆಚ್ಚಿನ ನಟ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...