alex Certify BIG NEWS: ಬೀದಿ ನಾಯಿ ದಾಳಿ ಮಾಡಿದ್ರೆ ಅದಕ್ಕೆ ಆಹಾರ ಹಾಕಿ ಸಲಹಿದವರೇ ಜವಾಬ್ಧಾರಿ: ಸುಪ್ರೀಂ ಕೋರ್ಟ್‌ ಮಹತ್ವದ ಅಭಿಪ್ರಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೀದಿ ನಾಯಿ ದಾಳಿ ಮಾಡಿದ್ರೆ ಅದಕ್ಕೆ ಆಹಾರ ಹಾಕಿ ಸಲಹಿದವರೇ ಜವಾಬ್ಧಾರಿ: ಸುಪ್ರೀಂ ಕೋರ್ಟ್‌ ಮಹತ್ವದ ಅಭಿಪ್ರಾಯ

ದಿನೇ ದಿನೇ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ಕುರಿತಂತೆ ಸುಪ್ರೀಂ ಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ಬೀದಿ ನಾಯಿಗಳ ಕಾಟಕ್ಕೆ ಪರಿಹಾರ ಕಂಡುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದೆ.

ಬೀದಿ ನಾಯಿಗಳಿಗೆ ಆಹಾರ ನೀಡುವವರನ್ನೇ ಅವುಗಳ ಲಸಿಕೆಗೆ ಜವಾಬ್ದಾರರನ್ನಾಗಿ ಮಾಡಬಹುದು ಮತ್ತು ಬೀದಿ ನಾಯಿಗಳು ಜನರ ಮೇಲೆ ದಾಳಿ ಮಾಡಿದರೆ ಆ ವೆಚ್ಚವನ್ನು ಅವುಗಳಿಗೆ ಊಟ ಹಾಕಿ ಸಲಹಿದವರೇ ಭರಿಸಬೇಕಾಗುತ್ತದೆ ಅಂತಾ ಸುಪ್ರೀಂ ಕೋರ್ಟ್‌ ಹೇಳಿದೆ.

ಜನರ ಸುರಕ್ಷತೆ ಮತ್ತು ಪ್ರಾಣಿಗಳ ಹಕ್ಕುಗಳ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಜೆಕೆ ಮಹೇಶ್ವರಿ ಅವರಿದ್ದ ಪೀಠ,  ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆಯೆಂದು ಹೇಳಿದೆ. ನಮ್ಮಲ್ಲಿ ಹೆಚ್ಚಿನವರು ನಾಯಿ ಪ್ರಿಯರು. ನಾನು ಕೂಡ ನಾಯಿಗಳಿಗೆ ಆಹಾರ ನೀಡುತ್ತೇನೆ. ಜನರು ಬಯಸಿದರೆ ಶ್ವಾನಗಳನ್ನು ನೋಡಿಕೊಳ್ಳಲಿ ಆದರೆ ಅವುಗಳನ್ನು ಗುರುತಿಸಬೇಕು, ಚಿಪ್ ಮೂಲಕ ಟ್ರ್ಯಾಕ್ ಮಾಡಬಾರದು ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ.

ಬೀದಿನಾಯಿ ಸಮಸ್ಯೆಯನ್ನು ಪರಿಹರಿಸಲು ತರ್ಕಬದ್ಧ ಪರಿಹಾರವನ್ನು ಕಂಡುಹಿಡಿಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಿದೆ. 2019 ರಿಂದೀಚೆಗೆ ಭಾರತದಲ್ಲಿ 1.5 ಕೋಟಿಗೂ ಹೆಚ್ಚು ಶ್ವಾನ ಕಡಿತ  ಪ್ರಕರಣಗಳು ದಾಖಲಾಗಿವೆ. ಉತ್ತರ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಆದ್ರೆ ಲಕ್ಷದ್ವೀಪದಲ್ಲಿ ಒಂದೇ ಒಂದು ಪ್ರಕರಣವೂ ದಾಖಲಾಗಿಲ್ಲ.

2019 ರಲ್ಲಿ 72,77,523 ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. 2020 ರಲ್ಲಿ 46,33,493 ಮತ್ತು 2021ರಲ್ಲಿ 17,01,133 ಕ್ಕೆ ಪ್ರಕರಣಗಳು ಇಳಿಕೆಯಾಗಿವೆ. ಆದರೆ 2022ರ ಮೊದಲ ಏಳು ತಿಂಗಳುಗಳಲ್ಲಿ 14.5 ಲಕ್ಷ ನಾಯಿ ಕಡಿತದ ಘಟನೆಗಳು ಸಂಭವಿಸಿವೆ. ಈ ವರ್ಷ ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಭಾರತದಲ್ಲಿ ಪ್ರತಿ ವರ್ಷ 100 ಕ್ಕೂ ಹೆಚ್ಚು ರೇಬೀಸ್ ಪ್ರಕರಣಗಳು ಮತ್ತು ಸಾವುಗಳು ಸಹ ಸಂಭವಿಸುತ್ತವೆ.

2019ರ ಎಣಿಕೆಯ ಪ್ರಕಾರ ಭಾರತದಲ್ಲಿ 1,53,09,355 ಬೀದಿನಾಯಿಗಳಿವೆ. ಉತ್ತರ ಪ್ರದೇಶ, ಓಡಿಶಾ ಮತ್ತು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಬೀದಿ ನಾಯಿಗಳು ಕಂಡುಬರುತ್ತವೆ. ಮಣಿಪುರ, ಲಕ್ಷದ್ವೀಪ ಮತ್ತು ದಾದ್ರಾ ಮತ್ತು ಹವೇಲಿಯಲ್ಲಿ ಬೀದಿ ನಾಯಿಗಳ ಸಂಖ್ಯೆ ಶೂನ್ಯ. ಕೇರಳ ಮತ್ತು ಮುಂಬೈನಲ್ಲಿ ಬೀದಿ ನಾಯಿಗಳನ್ನು ಕೊಲ್ಲುವ ಕುರಿತು ವಿವಿಧ ನಾಗರಿಕ ಸಂಸ್ಥೆಗಳು ಹೊರಡಿಸಿದ ಆದೇಶಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಕೆಲವು ಎನ್‌ಜಿಒಗಳು ಮತ್ತು ವೈಯಕ್ತಿಕ ಅರ್ಜಿದಾರರು ಬಾಂಬೆ, ಕೇರಳ ಸೇರಿದಂತೆ ಕೆಲವು ಹೈಕೋರ್ಟ್‌ಗಳ ತೀರ್ಪುಗಳ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...