ವಿಶ್ವದಾದ್ಯಂತ ಕೋವಿಡ್ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಭಾರತದಲ್ಲೂ ಗಣನೀಯವಾಗಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೋವಿಡ್ ನಿಯಮಗಳಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದು, ಈಗ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸಲಾಗಿದೆ.
ಈ ಮೊದಲು ವಿದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ನಿಯಮಗಳನ್ನು ಕಡ್ಡಾಯಗೊಳಿಸಲಾಗಿದ್ದು, ಇದೀಗ ನವೆಂಬರ್ 21ರ ಮಧ್ಯರಾತ್ರಿಯಿಂದಲೇ ಜಾರಿಯಾಗುವಂತೆ ಇದನ್ನು ರದ್ದುಗೊಳಿಸಲಾಗಿದೆ. ಇದರಿಂದ ಅಂತರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಪ್ರಯಾಣ ಪ್ರಕ್ರಿಯೆ ಮತ್ತಷ್ಟು ಸುಲಭವಾಗಿದೆ.
ಈ ಮೊದಲು ವಿದೇಶದಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ವ್ಯಾಕ್ಸಿನ್ ಪಡೆದಿರಬೇಕು ಎಂಬ ನಿಯಮವನ್ನು ವಿಧಿಸಲಾಗಿದ್ದು, ಅದನ್ನು ಕೂಡ ಕೈ ಬಿಡಲಾಗಿದೆ. ಜೊತೆಗೆ ಮಾಸ್ಕ್ ಧಾರಣೆ ಕಡ್ಡಾಯ ನಿಯಮವನ್ನು ಸಹ ರದ್ದುಗೊಳಿಸಲಾಗಿದೆ. ಈಗ ಏರ್ ಸುವಿಧಾ ನಿಯಮವನ್ನು ಸಹ ರದ್ದುಗೊಳಿಸಲಾಗಿದೆ.