alex Certify BIG NEWS: ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಮೇಲಿನ ನಿರ್ಬಂಧ ಮುಂದುವರಿಸಿದ ಡಿಸಿಜಿಎ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಮೇಲಿನ ನಿರ್ಬಂಧ ಮುಂದುವರಿಸಿದ ಡಿಸಿಜಿಎ

ಮುಂದಿನ ಆದೇಶದವರೆಗೆ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ಮೇಲಿನ ಸ್ಥಗಿತವು ಮುಂದುವರಿಯಲಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಅಧಿಕೃತ ಮಾಹಿತಿ ನೀಡಿದ್ದಾರೆ. ಜನವರಿ 19ರ ವರೆಗೆ ಈ ಹಿಂದೆ ಇದ್ದ ನಿರ್ಬಂಧವನ್ನು ಫೆಬ್ರವರಿ 28ರವರೆಗೆ ಮುಂದೂಡಲಾಗಿತ್ತು.

ಇಂದು ಹೊರಡಿಸಲಾದ ಅಧಿಸೂಚನೆಯ ಪ್ರಕಾರ ಏರ್​ ಬಬಲ್​ ವ್ಯವಸ್ಥೆಯ ಅಡಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಎಲ್ಲಾ ಸರಕು ಕಾರ್ಯಚರಣೆಗಳು ಹಾಗೂ ವಿಮಾನಯಾನಗಳಿಗೆ ಈ ನಿರ್ಬಂಧಗಳು ಅನ್ವಯಿಸುವುದಿಲ್ಲ ಎಂದು ಡಿಸಿಜಿಎ ಹೇಳಿದೆ.

ಭಾರತವು ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಹ್ರೇನ್, ಬಾಂಗ್ಲಾದೇಶ, ಭೂತಾನ್, ಕೆನಡಾ, ಇಥಿಯೋಪಿಯಾ, ಫಿನ್ಲ್ಯಾಂಡ್, ಫ್ರಾನ್ಸ್, ಜರ್ಮನಿ, ಇರಾಕ್, ಜಪಾನ್, ಕಜಕಿಸ್ತಾನ್, ಕೀನ್ಯಾ, ಕುವೈತ್, ಮಾಲ್ಡೀವ್ಸ್, ಮಾರಿಷಸ್, ನೇಪಾಳ, ನೆದರ್​ಲ್ಯಾಂಡ್​, ನೈಜೀರಿಯಾ, ಓಮನ್, ಕತಾರ್, ರಷ್ಯಾ, ರುವಾಂಡಾ, ಸೌದಿ ಅರೇಬಿಯಾ, ಸೀಶೆಲ್ಸ್, ಸಿಂಗಾಪುರ, ಶ್ರೀಲಂಕಾ, ಸ್ವಿಡ್ಜರ್​ಲ್ಯಾಂಡ್​, ತಾಂಜಾನಿಯಾ, ಉಕ್ರೇನ್, ಯುನೈಟೆಡ್ ಅರಬ್ ಎಮಿರೇಟ್ಸ್, ಯುನೈಟೆಡ್ ಕಿಂಗ್‌ಡಮ್, ಯುಎಸ್ ಮತ್ತು ಉಜ್ಬೇಕಿಸ್ತಾನ್ ಜೊತೆಗೆ ಏರ್​ ಬಬಲ್​ ಹೊಂದಿದೆ.

ಕೋವಿಡ್-19 ಹರಡುವಿಕೆಯನ್ನು ನಿಯಂತ್ರಿಸಲು ಮಾರ್ಚ್ 23, 2020 ರಿಂದ ಭಾರತದಲ್ಲಿ ನಿಗದಿತ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಕ್ಕೆ ನಿಷೇಧ ಹೇರಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...