ಕನ್ನಡಿಗರ ಹಬ್ಬ ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿದೆ. ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕೆ ಈಗಾಗಲೇ ಸಿದ್ಧತೆಗಳು ನಡೆದಿದ್ದು, ಇದರ ಮಧ್ಯೆ ಇಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಉಪಸ್ಥಿತಿಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.
ಇದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರತಿ ವರ್ಷವೂ ರಾಜ್ಯ ಸರ್ಕಾರದಿಂದ ನೀಡಲಾಗುವ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಇದಕ್ಕಾಗಿ 134 ಹೆಸರುಗಳನ್ನು ಸಮಿತಿ ಆಯ್ಕೆ ಮಾಡಿದೆ ಎನ್ನಲಾಗಿದೆ. ಅಂತಿಮವಾಗಿ 67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಸಿಗಲಿದ್ದು ಅಕ್ಟೋಬರ್ 29ರಂದು ಅಂತಿಮ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿದು ಬಂದಿದೆ.