
ಬಾಗಲಕೋಟೆ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಟನ್ ಅಕ್ಕಿಯನ್ನು ಬಾಗಲಕೋಟೆ ಜಿಲ್ಲೆಯ ತೇರದಾಳ ಪೊಲೀಸರು ಜಪ್ತಿ ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತೇರದಾಳ ಮಾರ್ಗವಾಗಿ ಲಾರಿ ಬೆಳಗಾವಿ ಕಡೆಗೆ ಸಾಗುತ್ತಿತ್ತು. ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.
ತೇರದಾಳ ಪೊಲೀಸರು ಲಾರಿ ಸಮೇತ 20 ಟನ್ ಅಕ್ಕಿ ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರೆದಿದೆ.