ಶಿವಮೊಗ್ಗ: ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಚುನವಣಾಧಿಕಾರಿಗಳು ವಾಹನಗಳ ತಪಾಸಣೆ ತೀವ್ರಗೊಳಿಸಿದ್ದು, ಅಕ್ರಮವಾಗಿ ಸಾಗಿಸುತ್ತಿರುವ ವಸ್ತು, ಹಣಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.
ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 10 ಲಕ್ಷ ಮೌಲ್ಯದ ಆಹಾರ ವಸ್ತುಗಳನ್ನು ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲಿಸರು ವಶಕ್ಕೆ ಪಡೆದಿದ್ದಾರೆ.
ಆಗುಂಬೆ ಬಳಿ ಲಾರಿಯಲ್ಲಿ ಸಾಗಿಸುತ್ತಿದ್ದ 5 ಲಕ್ಷ ಮೌಲ್ಯದ ಅಕ್ಕಿಯನ್ನು ಹಾಗೂ 3 ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ 4.50 ಲಕ್ಷ ಮೌಲ್ಯದ ರಗ್ಗುಗಳನ್ನು ಜಪ್ತಿ ಮಾಡಲಾಗಿದೆ.
ತೀರ್ಥಹಳ್ಳಿ ತಾಲುಕಿನ ಆಗುಂಬೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.