ಬೆಂಗಳೂರು: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕರದಲ್ಲಿ ಅಕ್ರಮವಾಗಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಡಾ ಆಯುಕ್ತ ಪ್ರೀತಮ್ ನಸಲಾಪುರೆ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶ ನೀಡಿದೆ.
ಬುಡಾ ಆಯುಕ್ತ ಪ್ರೀತಮ್ ನಸಲಾಪುರೆ ವಿರುದ್ಧ ಕೇಸ್ ದಾಖಲಿಸುವಂತೆ ನಾಲ್ಕನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ರಾಜು ಟೊಪಣ್ಣವರ್ ಎಂಬುವವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಆದರೂ ಲೋಕಾಯುಕ್ತ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಟೋಪಣ್ಣವ್ ಕೋರ್ಟ್ ಮೆಟ್ಟಿಲೇರಿದ್ದರು. ಇದೇ ಪ್ರಕರಣ ಸಂಬಂಧ ಬುಡಾ ಆಯುಕ್ತರ ವಿರುದ್ಧ ಕ್ರಮ ಜರಿಗಿಸುವಂತೆ ಕೋರ್ಟ್ ಸೂಚಿಸಿದ್ದು, ಅಧಿಕಾರಿ ವಿರುದ್ಧ 120b, 405, 406, 420, 425, 463466, 468, 464, 465, 477a ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಿ ವಿಚಾರಣೆ ನಡೆಸುವಂತೆ ಸೂಚಿಸಿದೆ.
ಅಕ್ರಮ ನಿವೇಶನ ಹಂಚಿಕೆ ಮಾಡಿ ಸರ್ಕಾರದ ಬೊಕ್ಕಸಕ್ಕೆ 100 ಕೋಟಿಗೂ ಅಧಿಕ ವಂಚನೆ ಮಾಡಿರುವ ಅಧಿಕಾರಿಗಳಿಗೆ ಈಗ ಬಂಧನ ಭೀತಿ ಶುರುವಾಗಿದೆ.