ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಎರಡು ಪಟ್ಟಿಯಲ್ಲಿಯೂ ಶಾಸಕ ಅಖಂಡ ಶ್ರೀನಿವಾಸ್ ಗೆ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಶಾಸಕರಿಗೆ ತಳಮಳ ಆರಂಭವಾಗಿದೆ.
ಈ ನಡುವೆ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳು ಪಟ್ಟು ಹಿಡಿದಿದ್ದಾರೆ. ಸ್ವಾಮೀಜಿಗಳ ನಿಯೋಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದೆ.
ಬೋವಿ ಸಮಾಜದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ ನೇತೃತ್ವದ ನಿಯೋಗ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದೆ.