ಬೆಂಗಳೂರು; ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಯುವಕರು ನಡೆಸುತ್ತಿರುವ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜಕೀಯ ಪ್ರೇರಣೆಯಿಂದ ಪ್ರತಿಭಟನೆಗಳು ನಡೆಯುತ್ತಿವೆ. ಕಾಂಗ್ರೆಸ್ ನಾಯಕರು ಬೆಂಕಿಗೆ ತುಪ್ಪ ಹಾಕುವ ಕೆಲಸ ಮಾಡುತ್ತಿದ್ದಾರೆ. ವಿರೋಧದ ನೆಪದಲ್ಲಿ ರೈಲುಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಅಗ್ನಿಪಥ್ ಯೋಜನೆ ಒಂದು ವಿನೂತನ ಕಾರ್ಯಕ್ರಮ. ಅಗ್ನಿಪಥ್ ನಲ್ಲಿ ಶಿಸ್ತಿನ ತರಬೇತಿ ನೀಡಲಾಗುತ್ತದೆ. ಅನಗತ್ಯವಾಗಿ ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡುವುದು ಸರಿಯಲ್ಲ ಎಂದು ಹೇಳಿದರು.