ಕೋಲಾರ: ರಾಜ್ಯಸಭೆ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಶಾಸಕ ಶ್ರೀನಿವಾಸ್ ಗೌಡ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಗೆ ಮತ ಹಾಕುವ ಮೂಲಕ ರಾಜ್ಯಸಭೆ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಶ್ರೀನಿವಾಸ್ ಗೌಡ ಅವರ ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಮನೆಯ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜೆಡಿಎಸ್ ಶಾಸಕರಾಗಿ ಆಯ್ಕೆಯಾಗಿ, ಪಕ್ಷಕ್ಕೆ ಹಾಗೂ ಕ್ಷೇತ್ರದ ಮತದಾರರಿಗೆ ದ್ರೋಹ ಬಗೆದಿರುವ ಶಾಸಕರು ರಾಜೀನಾಮೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಶಾಸಕರ ಮನೆ ಸುತ್ತಲೂ ಹೆಚ್ಚಿನ ಭದ್ರತೆಗಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ನಿಯಂತ್ರಿಸಿದ್ದಾರೆ.