ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಾದರೂ ಆರೋಪಿಗಳನ್ನು ಬಂಧಿಸದ ಪೊಲೀಸರ ಕ್ರಮದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ.
ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆಗೆ ನಿಂತಂತೆ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಬಿಜೆಪಿ ಸರ್ಕಾರ ಮಾಡುವಂತಿದೆ ಎಂದು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ.
ʼಕೊರೊನಾʼ ಲಸಿಕೆ ಪಡೆದವರಿಗೆ ಬಿಗ್ ರಿಲೀಫ್: ಅಂತರ್ ರಾಜ್ಯ ಪ್ರಯಾಣದ ಬಗ್ಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ ರಿಲೀಸ್
ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿರುವ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ. ಸಿದ್ದು ಸವದಿಯನ್ನ ರಕ್ಷಿಸಿದ ಮಹಿಳಾ ವಿರೋಧಿ ಬಿಜೆಪಿಯಿಂದ ಮಹಿಳೆಯರು ರಕ್ಷಣೆ ಬಯಸುವುದು ವ್ಯರ್ಥ. ಮೈಸೂರಿನಂತಹ ನಗರದಲ್ಲಿ ಅತ್ಯಾಚಾರ ಪ್ರಕರಣ ನಡೆದು 24 ಗಂಟೆಗೂ ಅಧಿಕ ಸಮಯ ಕಳೆದರೂ ಆರೋಪಿಗಳನ್ನು ಬಂಧಿಸಲಾಗದ್ದು ಗೃಹ ಇಲಾಖೆ ಕಾರ್ಯಕ್ಷಮತೆ ಕುಸಿದಿರುವುದಕ್ಕೆ ಸಾಕ್ಷಿ ಎಂದು ಗುಡುಗಿದೆ.