alex Certify BIG NEWS: ಅಧಿಕಾರಿಗಳು ತಪ್ಪು ಮಾಡಿದ್ದಾರೆ ಅದಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ; ಗೃಹ ಸಚಿವ ಅರಗ ಜ್ಞಾನೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಧಿಕಾರಿಗಳು ತಪ್ಪು ಮಾಡಿದ್ದಾರೆ ಅದಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ; ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಐಎ ಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಸೇರಿದಂತೆ ಮೂವರು ಅಧಿಕಾರಿಗಳ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಐಎಎಸ್, ಐಪಿಎಸ್ ಅಧಿಕಾರಿಗಳು ಸಮಾಜಕ್ಕೆ ಮಾದರಿಯಾಗಿ ಕೆಲಸ ಮಾಡಬೇಕು. ಅದನ್ನು ಬಿಟ್ಟು ಈ ರೀತಿ ಕಿತ್ತಾಡುವುದಲ್ಲ ಎಂದು ಗರಂ ಆಗಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಉತ್ತಮ ಹುದ್ದೆಯಲ್ಲಿರುವ ಅಧಿಕಾರಿಗಳು ಈ ರೀತಿ ಕಿತ್ತಾಟ ನಡೆಸಿದರೆ ಹೇಗೆ? ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಅದಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಅಧಿಕಾರಿಗಳು ತಪ್ಪು ಮಾಡಿದ್ದಾರೆ ಎನಿಸುತ್ತಿದೆ. ಹಾಗಾಗಿ ಮೂವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ. ಪ್ರಕರಣದ ಬಗ್ಗೆ ತನಿಖೆ ನಡೆಯಲಿದೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...