alex Certify BIG NEWS: ಅಧಿಕಾರಿಗಳ ಜಟಾಪಟಿ – ಸರ್ಕಾರದ ಎಡಬಿಡಂಗಿತನ; ಪ್ರಜಾಪ್ರಭುತ್ವದ 3 ಮಂಗಗಳು ನಾಚುವಂತಹ ವರ್ತನೆ; ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸಿದ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಧಿಕಾರಿಗಳ ಜಟಾಪಟಿ – ಸರ್ಕಾರದ ಎಡಬಿಡಂಗಿತನ; ಪ್ರಜಾಪ್ರಭುತ್ವದ 3 ಮಂಗಗಳು ನಾಚುವಂತಹ ವರ್ತನೆ; ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸಿದ ಕುಮಾರಸ್ವಾಮಿ

ಬೆಂಗಳೂರು: ಮಹಿಳಾ ಅಧಿಕಾರಿಗಳ ಜಗಳದಲ್ಲಿ ಜನಪ್ರತಿನಿಧಿಗಳು ಪರ – ವಿರೋಧದ ಹೇಳಿಕೆಗಳನ್ನು ನೀಡಿ ತಮ್ಮ ಬಾಯಿಚಪಲ ತೀರಿಸಿಕೊಳ್ಳುತ್ತಿದ್ದಾರೆ. ಆದರೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿದೆ. ಅಧಿಕಾರಿಗಳು ಬಹಿರಂಗವಾಗಿ ಕಿತ್ತಾಡುತ್ತಿದರೂ ಕ್ರಮ ಕೈಗೊಳ್ಳದೇ ಮುಖ್ಯಮಂತ್ರಿಗಳು ಹಾಗೂ ಮುಖ್ಯಕಾರ್ಯದರ್ಶಿಗಳು ಏನು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮೈಸೂರಿನ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರ ನಡುವಿನ ಜಟಾಪಟಿ ಬಗ್ಗೆ ಕಿಡಿಕಾರಿರುವ ಕುಮಾರಸ್ವಾಮಿ, ಅಧಿಕಾರಿಗಳಿಬ್ಬರ ಹಾದಿ- ಬೀದಿ ಜಗಳ ನೋಡಿದರೆ, ರಾಜ್ಯದಲ್ಲಿ ಸರಕಾರ ಅಸ್ಥಿತ್ವದಲ್ಲಿದಿಯೋ ಇಲ್ಲವೋ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಅಧಿಕಾರಿಗಳ ನಡುವೆ ಸಮನ್ವಯ ಇಲ್ಲದೆ ಪರಸ್ಪರ ಕಿತ್ತಾಡಿಕೊಂಡರೆ ಬೇರೆ ಬೇರೆ ಇಲಾಖೆಯಲ್ಲಿರುವವರು ನಾಳೆ ಇದೇ”ಹಾದಿ” ತುಳಿದರೆ ರಾಜ್ಯದ ಪರಿಸ್ಥಿತಿ ಏನಾಗಬಾರದು? ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 24 ಮಂದಿಯ ಜೀವ ಬಲಿ ಪಡೆಯಲಾಯಿತು. ಅಂತಹದೇ ಪರಿಸ್ಥಿತಿ ಮೈಸೂರಿನಲ್ಲೂ ನಿರ್ಮಾಣವಾಗಿದೆ. ಅಮಾಯಕರನ್ನು ಬಲಿ ಪಡೆಯುವ ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ತನ್ನ ಜವಾಬ್ದಾರಿ ಪ್ರದರ್ಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಧಿಕಾರಿಗಳ ಜಟಾಪಟಿಯನ್ನು ಸರ್ಕಾರ ಲಘುವಾಗಿ ಪರಿಗಣಿಸಿದಂತಿದೆ. ಮೂಡ ಕಮಿಷನರ್ 12 ಕೋಟಿ ರೂಪಾಯಿಗಿಂತ ಸಿ ಎಸ್ ಆರ್ ಎಫ್ ಹೆಚ್ಚು ಹಣದ ಲೆಕ್ಕ ಕೊಟ್ಟಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಆರೋಪಿಸಿದರೆ, 42 ಕೋಟಿ ರೂಪಾಯಿ ಮಿಗಿಲಾದ ಹಣದ ದುರ್ಬಳಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿರುದ್ಧ ಬಿಜೆಪಿ ಸಂಸದ ಅಬ್ಬರಿಸುತ್ತಾರೆ. ಆವ್ಯವಹಾರದ ಕಡು ಭ್ರಷ್ಟಾಚಾರದ ವಾಸನೆ ಗಬ್ಬೆದ್ದು ನಾರುತ್ತಿದ್ದರೂ ಸರ್ಕಾರ ಕಂಡು ಕಾಣದಂತೆ ವರ್ತಿಸುತ್ತಿರುವುದರ ಮರ್ಮವೇನು? ಇದು ಮುಖ್ಯಮಂತ್ರಿಯ ದೌರ್ಬಲ್ಯವೋ? ಸರ್ಕಾರದ ಉನ್ನತ ಅಧಿಕಾರಿಗಳ ದೌರ್ಬಲ್ಯವೋ? ಯಾರನ್ನು ಓಲೈಸಲು ಸರ್ಕಾರ ಕಣ್ಣು, ಕಿವಿ, ಬಾಯಿ ಮುಚ್ಚಿ ಕುಳಿತಿದೆ ಎಂದು ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವದ ಮೂರು ಮಂಗಗಳು ನಾಚುವಂತೆ ವರ್ತಿಸುತ್ತಿರುವ ಸರ್ಕಾರದ ಎಡಬಿಡಂಗಿತನ ಮತ್ತು ಮಹಾಮೌನ ಕಂಡು ಜನತೆ ಹಾದಿ ಬೀದಿಯಲ್ಲಿ ನಗುವಂತಾಗಿದೆ. ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ತಾಕತ್ತಿದ್ದರೆ ಬಹಿರಂಗ ಸಂಘರ್ಷಕ್ಕೆ ಕಡಿವಾಣ ಹಾಕಲಿ. ಇಲ್ಲ ಅಧಿಕಾರ ಬಿಟ್ಟು ತೊಲಗಲಿ ಎಂದು ಆಗ್ರಹಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...