ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ತೀವ್ರ ಅಸಮಾಧಾನಗೊಂಡಿರುವ ಶಾಸಕರಾದ ರಮೇಶ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆದರೂ ಅತ್ತ ಸುಳಿಯಲೂ ಇಲ್ಲ.
ಸಿಡಿ ಸಂಕಷ್ಟದಲ್ಲಿ ಸಿಲುಕಿರುವ ರಮೇಶ ಜಾರಕಿಹೊಳಿಗೆ ಬಿಜೆಪಿ ನಾಯಕರು ಸಚಿವ ಸ್ಥಾನ ನೀಡುವ ಬಗ್ಗೆ ಯಾವುದೇ ಆಸಕ್ತಿ ತೋರುತ್ತಿಲ್ಲ. ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಈ ಬಗ್ಗೆ ಮೌನವಾಗಿದ್ದಾರೆ. ಸಹೋದರ ಬಾಲಚಂದ್ರ ಜಾರಕಿಹೊಳಿಗೂ ಮಂತ್ರಿ ಸ್ಥಾನ ನೀಡುವ ಬಗ್ಗೆ ವರಿಷ್ಠರು ಮನಸ್ಸು ಮಾಡುತ್ತಿಲ್ಲ. ಈ ಎಲ್ಲಾ ಕಾರಣಕ್ಕೆ ಅಸಮಾಧಾನಗೊಂಡಿರುವ ಜಾರಕಿಹೊಳಿ ಸಹೋದರರು ಅಧಿವೇಶನಕ್ಕೂ ಗೈರಾಗಿ ಗೋಕಾಕ್ ನಲ್ಲಿ ಬೀಡು ಬಿಟ್ಟಿದ್ದಾರೆ. ಗೋಕಾಕ್ ನಲ್ಲಿಯೇ ಇದ್ದರೂ ಕ್ಷೇತ್ರದ ಜನರತ್ತ ಸುಳಿಯುತ್ತಲೂ ಇಲ್ಲ, ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳುತ್ತಲೂ ಇಲ್ಲ ಎನ್ನಲಾಗಿದೆ.
GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ
ಇದೀಗ ಇಂದಿನಿಂದ ಸಿಎಂ ಬಸವರಾಜ್ ಬೊಮ್ಮಾಯಿ ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಇಂದು ನೂತನ ಮಹಾನಗರ ಪಾಲಿಕೆ ಸದಸ್ಯರಿಗೆ ಸನ್ಮಾನ ಹಾಗೂ ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಈ ವೇಳೆ ಜಾರಕಿಹೊಳಿ ಸಹೋದರರು ಸಿಎಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಒಟ್ಟಾರೆ ಜಾರಕಿಹೊಳಿ ಸಹೋದರರ ರಾಜಕೀಯ ನಡೆ ಕುತೂಹಲಕ್ಕೆ ಕಾರಣವಾಗಿದೆ.